ವಿವಿದೆಡೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವಿವಿದೆಡೆ ನಿರ್ಮಿಸಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಇವರು ಅಕ್ಟೋಬರ್ 5 ರಂದು ಉದ್ಘಾಟಿಸಿಲಿದ್ದಾರೆ.


ಶನಿವಾರ ಬೆಳಿಗ್ಗೆ 10 ಗಂಟೆಗೆ ಮಂಗಳೂರು ತಾಲೂಕಿನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಿಜೈ, 10.30 ಗಂಟೆಗೆ ಮಂಗಳೂರು ತಾಲೂಕಿನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಪಡೀಲು, 11 ಗಂಟೆಗೆ ಮಂಗಳೂರು ತಾಲೂಕಿನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಎಕ್ಕೂರು ಈ ಸ್ಥಳಗಳಲ್ಲಿ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Also Read  ತೊಡಿಕಾನ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

error: Content is protected !!
Scroll to Top