ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.2019-20ನೇ ಸಾಲಿಗೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಶುಲ್ಕ ವಿನಾಯಿತಿ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಮೆಟ್ರಿಕ್-ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಗಳನ್ನು ವೆಬ್‍ಸೈಟ್ www.karepass.cgg.gov.in ಅಥವಾ www.backwardclasses.kar.nic.in ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 8050770005, 8050770004 ಸಂಪರ್ಕಿಸಬೇಕು ಎಂದು ಜಿಲ್ಲಾ ಅಧಿಕಾರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಅಬಕಾರಿ ನೀತಿ ಹಗರಣ         ಸುಪ್ರೀಂಕೋರ್ಟ್ ಜಾಮೀನು ಮಂಜೂರು

error: Content is protected !!
Scroll to Top