ಉದ್ಯೋಗ : ನೇರ ನೇಮಕಾತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಮುತ್ತೋಟ್ಟು ಫೈನಾನ್ಸ್ ಪ್ರೈವೆಟ್ ಲಿಮಿಟೆಡ್ ಇದರ ವತಿಯಿಂದ ಅಕ್ಟೋಬರ್ 9ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು ಮಹಾನಗರಪಾಲಿಕೆ ಕಟ್ಟಡ, ಲಾಲ್‍ಬಾಗ್ ಇಲ್ಲಿ ನೇರ ನೇಮಕಾತಿ ಆಯೋಜಿಸಲಾಗಿದೆ.


2017-18 ಹಾಗೂ 2018-19 ನೇ ಸಾಲಿನಲ್ಲಿ ತೇರ್ಗಡೆಯಾದ ಎಂ.ಬಿ.ಎ. ಮತ್ತು ಎಂ.ಕಾಂ. ಆಸಕ್ತ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ ವಿವರವುಳ್ಳ ಬಯೋಡಾಟಾ ಹಾಗೂ ಆಧಾರ್ ಕಾರ್ಡ್‍ನೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು hಣಣಠಿs://ಛಿಚಿಡಿeeಡಿ.muಣhooಣಜಿiಟಿಚಿಟಿಛಿe.ಛಿom ವೆಬ್‍ಸೈಟ್‍ನಲ್ಲಿ ಹೆಸರು ನೋಂದಣಿ ಮಾಡಬಹುದು.ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಹಾನಗರಪಾಲಿಕೆ ಕಟ್ಟಡ, ಲಾಲ್‍ಬಾಗ್, ಮಂಗಳೂರು ಇಲ್ಲಿ ಬೆಳಿಗ್ಗೆ 10 ರಿಂದ 12 ಗಂಟೆ ವರೆಗೆ ನೇರ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8296422700 ನ್ನು ಸಂಪರ್ಕಿಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಏಕಾಂಗಿಯಾಗಿ ವಾಸಿಸುತ್ತಿದ್ದ ಮಹಿಳೆಗೆ ಹೃದಯಾಘಾತ ➤ ವಾರದ ಬಳಿಕ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹ

error: Content is protected !!
Scroll to Top