ಕಡಬ: ಕೆರೆಗೆ ಹಾರಿ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಅ.05. ಯುವಕನೊರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರದಂದು ಕಡಬ ತಾಲೂಕಿನ ಕೊಣಾಜೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆ ಗ್ರಾಮದ ಹಾಲಾಡಿ ದಿ.ಶೇಷಪ್ಪ ಗೌಡ ಎಂಬವರ ಪುತ್ರ ಬಾಲಚಂದ್ರ (31ವ.) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಬಾಲಚಂದ್ರ ನಾಲ್ಕು ದಿನಗಳ ಹಿಂದೆಯಷ್ಟೇ ಮನೆಗೆ ಬಂದಿದ್ದರು. ನವೆಂಬರ್ ತಿಂಗಳಿನಲ್ಲಿ ಮದುವೆ ನಿಗದಿಯಾಗಿದ್ದು, ಶನಿವಾರದಂದು ಮನೆಯಲ್ಲಿದ್ದ ಇವರು ತನ್ನ ಸಹೋದರನ ಮನೆಗೆ ಹೋಗುವ ದಾರಿಯಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಾಯಿ ನೀಲಮ್ಮ ಹಾಗೂ ಮೂವರು ಸಹೋದರರು, ಓರ್ವ ಸಹೋದರಿಯನ್ನು ಅಗಲಿದ್ದಾರೆ. ಮ್ರತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮೃತರ ಸಹೋದರ ವಾಸುದೇವ ಅವರು ಉಪ್ಪಿನಂಗಡಿ ಪೋಲಿಸರಿಗೆ ದೂರು ನೀಡಿದ್ದಾರೆ.

Also Read  ಐತ್ತೂರು ಗ್ರಾಮದ ಸುಂಕದಕಟ್ಟೆ 72 ಕಾಲನಿಯ ಮುತ್ತುಮಾರಿಯಮ್ಮ ದೇವಸ್ಥಾನದ 41ನೇ ವರ್ಷದ ವರ್ಷಾವಧಿ ಜಾತ್ರೋತ್ಸವ

error: Content is protected !!
Scroll to Top