2019-20ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ➤ ಸಾಲ ಸೌಲಭ್ಯ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.2019-20ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಮತ್ತು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಇವರ ಚೈತನ್ಯ ಸಹಾಯಧನ ಯೋಜನೆಯಡಿ ಗುರಿಗಿಂತ ಕಡಿಮೆ ಅರ್ಜಿಗಳು ಸ್ವೀಕಾರಗೊಂಡಿರುವುದರಿಂದ ಈ ಯೋಜನೆಯಲ್ಲಿ ಜಿಲ್ಲಾ ಸಮಿತಿಯ ಆದೇಶದಂತೆ ಅರ್ಜಿಗಳನ್ನು ಮತ್ತೊಮ್ಮೆ ಆಹ್ವಾನಿಸಲಾಗಿದೆ.

ಯೋಜನೆಯಲ್ಲಿ ಸ್ವಉದ್ಯೋಗ ಕೈಗೊಳ್ಳಲು ಬ್ಯಾಂಕ್ ಸಹಯೋಗದೊಂದಿಗೆ ರೂ.1 ಲಕ್ಷದಿಂದ ಗರಿಷ್ಠ 5 ಲಕ್ಷಗಳವರೆಗೆ ಸಾಲ ಮಂಜೂರಾತಿಗೆ ಅವಕಾಶವಿದ್ದು, ಸಾಲ ಮಂಜೂರಾದಲ್ಲಿ ಸಂಬಂಧಿಸಿದ ಸಹಾಯಧನ ಗರಿಷ್ಠ ರೂ. 25000/- ನಿಗಮದ ವತಿಯಿಂದ ನೀಡಲಾಗುತ್ತದೆ.ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಗಂಗಾಕಲ್ಯಾಣ ಯೋಜನೆಯಡಿ ಭೌತಿಕ ಗುರಿಗಿಂತ ಅರ್ಜಿಗಳು ಕಡಿಮೆ ಸ್ವೀಕಾರಗೊಂಡಿರುವುದರಿಂದ ಇನ್ನೊಮ್ಮೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Also Read  ಯುವತಿಗೆ ವಂಚನೆ ಪ್ರಕರಣ ➤ ಬೇರೆ ಯುವತಿಯೊಂದಿಗೆ ವಿವಾಹವಾದ ಯುವಕನ ಬಂಧನ

ಈ ಯೋಜನೆಯಲ್ಲಿ ಅರ್ಜಿದಾರರಿಗೆ ಕನಿಷ್ಠ 1 ಎಕ್ರೆ ಜಮೀನು ಇರಬೇಕಾಗಿದ್ದು, ಕುಟುಂಬದ ವಾರ್ಷಿಕ ಆದಾಯ ರೂ. 98000/- ಮೀರಿರಬಾರದು ಹಾಗೂ ಯೋಜನೆಗೆ ಪೂರಕವಾದ ದಾಖಲಾತಿಗಳನ್ನು ಸಲ್ಲಿಸಬೇಕು.ಆಸಕ್ತರು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್ ಮಂಗಳೂರು ಇಲ್ಲಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಅಕ್ಟೋಬರ್ 31 ರೊಳಗೆ ಕಚೇರಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2456544 ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top