ಅ.13 ವಾಲ್ಮೀಕಿ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದ.ಕ ಜಿಲ್ಲೆ ವಾಲ್ಮೀಕಿ ನಾಯಕ ಎಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ  ಆಚರಿಸಲು ನಿರ್ಧರಿಸಲಾಗಿದೆ.

13 ರಂದು ಬೆಳಿಗ್ಗೆ 10.30 ಗಂಟೆಗೆ ನೇತ್ರಾವತಿ ಸಭಾಂಗಣ, ದ.ಕ ಜಿಲ್ಲಾ ಪಂಚಾಯತ್ ಇಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಲಿದೆ.ಮುಜರಾಯಿ, ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

Also Read  ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಆರೋಗ್ಯದಲ್ಲಿ ಏರುಪೇರು ವೇಳೆ

error: Content is protected !!
Scroll to Top