ಜಮೀನು ಖಾತೆ ವರ್ಗಾವಣೆಗೆ ಲಂಚದ ಬೇಡಿಕೆ ➤ ರಾಮಕುಂಜ ವಿಎ ದುರ್ಗಪ್ಪ ಬಲೆಗೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.10. ತನ್ನ ದೊಡ್ಡಪ್ಪನ ಹೆಸರಿನಲ್ಲಿದ್ದ ಜಮೀನನ್ನು ತನ್ನ ಹೆಸರಿಗೆ ಬದಲಾಯಿಸಲು ಲಂಚ ಸ್ವೀಕರಿಸುತ್ತಿದ್ದ ಗ್ರಾಮಕರಣಿಕನೋರ್ವ ಎಸಿಬಿ ಬಲೆಗೆ ಬಿದ್ದ ಘಟನೆ ಗುರುವಾರ ಸಂಜೆ ಪುತ್ತೂರಿನಲ್ಲಿ ನಡೆದಿದೆ.

ಕಡಬ ತಾಲೂಕು ಹಳೆನೇರಂಕಿ ಗ್ರಾಮದ ಶರತ್ ಪಿ. ಎಂಬವರು ತನ್ನ ದೊಡ್ಡಪ್ಪನ ಹೆಸರಿನಲ್ಲಿದ್ದ ಜಮೀನಿನ ಖಾತೆಯನ್ನು ತನ್ನ ಹೆಸರಿಗೆ ವರ್ಗಾಯಿಸಲೆಂದು ಅರ್ಜಿ ಸಲ್ಲಿಸಿದ್ದು, ಈ ವೇಳೆ ಹಳೆನೇರಂಕಿ ಗ್ರಾಮ ಕರಣಿಕ ದುರ್ಗಪ್ಪ ಲಂಚಕ್ಕೆ ಬೇಡಿಕೆ ಇರಿಸಿದ್ದರೆನ್ನಲಾಗಿದೆ. ಅದರಂತೆ ಐದು ಸಾವಿರ ರೂ‌. ಲಂಚ ನೀಡಿದ್ದ ಶರತ್, ಗುರುವಾರದಂದು ಮೂರು ಸಾವಿರ ರೂ. ಲಂಚ ನೀಡುವ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಗೆ ದೂರು ನೀಡಿದ್ದು, ಗುರುವಾರ ಸಂಜೆ ಪುತ್ತೂರಿನ ಕರ್ನಾಟಕ ಬ್ಯಾಂಕ್ ಬಳಿ ಲಂಚ ಸ್ವೀಕರಿಸುತ್ತಿದ್ದ ದುರ್ಗಪ್ಪನನ್ನು ರೆಡ್ ಹ್ಯಾಂಡ್ ಆಗಿ ಬಲೆಗೆ ಕೆಡವಿದ್ದು, ಭ್ರಷ್ಟಾಚಾರ ನಿಗ್ರಹ ಕಾನೂನಿನಡಿ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

Also Read  ಮಂಗಳೂರು: ಗಾಂಜಾ ದಂಧೆ ಬಯಲು.!  ➤ಮೆಡಿಕಲ್‌ ವಿದ್ಯಾರ್ಥಿನಿಯರ ಸಹಿತ ಹಲವರು ಅರೆಸ್ಟ್..!

error: Content is protected !!
Scroll to Top