ನಕಲಿ ಟಿಕ್‍ಟಾಕ್ ಖಾತೆ ತೆರೆದು ಮಹಿಳೆಯ ಅಶ್ಲೀಲ ವೀಡಿಯೋ ವೈರಲ್ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ.14. ಟಿಕ್‍ಟಾಕ್ ನಕಲಿ ಖಾತೆ ತೆರೆದು ಮಹಿಳೆಯ ಅಶ್ಲೀಲ ವಿಡಿಯೋವನ್ನು ವೈರಲ್ ಮಾಡಿದ ಆರೋಪಿಯನ್ನು ಬಂಧಿಸಿರುವ ಶಿವಮೊಗ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಬಂಧಿತ ಆರೋಪಿಯನ್ನು ಭದ್ರಾವತಿಯ ಗೋಣಿಬೀಡು ನಿವಾಸಿ ಸಂಜಯ್ ಕುಮಾರ್ (23) ಎಂದು ಗುರುತಿಸಲಾಗಿದೆ. ಬೆಂಗಳೂರಲ್ಲಿ ಕ್ಯಾಬ್ ಚಾಲಕನಾಗಿ ದುಡಿಯುತ್ತಿದ್ದ ಸಂಜಯ್ ಮಹಿಳೆಯೋರ್ವರ ಹೆಸರಿನಲ್ಲಿ ನಕಲಿ ಟಿಕ್‍ಟಾಕ್ ಖಾತೆ ತೆರೆದಿದ್ದಲ್ಲದೆ ಅದೇ ಮಹಿಳೆಯ ವಿಡಿಯೋಗೆ ಅಶ್ಲೀಲ ಧ್ವನಿ ನೀಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಮಹಿಳೆಯು ಶಿವಮೊಗ್ಗ ಠಾಣೆಗೆ ನೀಡಿದ ದೂರಿನಂತೆ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Also Read  ಪುತ್ತೂರು: ಅನಧಿಕೃತ ವೋಟರ್ ಐಡಿ ವಿತರಣೆ ಆರೋಪ ➤ ಜನಸೇವಾ ಕೇಂದ್ರಕ್ಕೆ ಎಸಿ ದಾಳಿ

error: Content is protected !!
Scroll to Top