ಪುತ್ತೂರು: ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಆರೋಪಿ ಪ್ರಭಾರ ಮುಖ್ಯ ಶಿಕ್ಷಕ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.16. ಪರೀಕ್ಷೆ ಶುಲ್ಕ ಪಾವತಿಸಲು ಬಂದ ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕನನ್ನು ಬಂಧಿಸಿದ ಘಟನೆ ಬುಧವಾರದಂದು ನಡೆದಿದೆ.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ತಾಲ್ಲೂಕಿನ ಸರ್ಕಾರಿ ಪ್ರೌಢ ಶಾಲೆಯೊಂದರಲ್ಲಿ ಪರೀಕ್ಷಾ ಶುಲ್ಕ ಪಾವತಿಸಲೆಂದು ಸೋಮವಾರದಂದು ಶಾಲೆಗೆ ತೆರಳಿದ ಅಪ್ರಾಪ್ತ ವಯಸ್ಸಿನ ಶಾಲಾ ವಿದ್ಯಾರ್ಥಿನಿಗೆ ಶಾಲಾ ಪ್ರಭಾರ ಮುಖ್ಯ ಶಿಕ್ಷಕನಾಗಿದ್ದ ಪುತ್ತೂರು ತಾಲೂಕು ಒಳಮೊಗ್ರು ನಿವಾಸಿ ನಾಸಿರ್ (40) ಲೈಂಗಿಕ ಕಿರುಕುಳ ನೀಡಿದ್ದಾನೆನ್ನಲಾಗಿದ್ದು, ಈ ಬಗ್ಗೆ ಸಂತ್ರಸ್ಥ ಬಾಲಕಿ ನೀಡಿದ ದೂರಿನಂತೆ ಆರೋಪಿಯನ್ನು ಬಂಧಿಸಿರುವ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿಯ ಕೊಲೆ ಯತ್ನ ► ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

error: Content is protected !!
Scroll to Top