ಅರಬ್ಬೀ ಸಮುದ್ರದಲ್ಲಿ ಪ್ರತಿಕೂಲ ಹವಾಮಾನ ➤ ಕರಾವಳಿಯಾದ್ಯಂತ ಇನ್ನೆರಡು ದಿನ ಭಾರೀ ಮಳೆ

(ನ್ಯೂಸ್ ಕಡಬ) newskadaba.com
ಮಂಗಳೂರು, ಅ.18. ಸಮುದ್ರದಲ್ಲಿ ಪ್ರತಿಕೂಲ ಹವಾಮಾನವಿರುವುದರಿಂದ ಕರಾವಳಿದಾದ್ಯಂತ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಅಕ್ಟೋಬರ್ 19ರವರೆಗೆ ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಲಾಗಿದೆ.

ಅರಬ್ಬಿ ಸಮುದ್ರದ ಆಗ್ನೇಯ ದಿಕ್ಕಿನಿಂದ ಕೇರಳದ ಕರಾವಳಿ ಹಾಗೂ ಲಕ್ಷದ್ವೀಪದ ಕಡೆಗೆ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಬಿರುಗಾಳಿಯು ಬೀಸಲಿರುವುದೆ ಎಂದು ಹವಾಮಾನ ಇಲಾಖೆಯು ನೀಡಿದ ವರದಿಯಂತೆ ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾದ ಪ್ರತಿಕೂಲ ಹವಾಮಾನದಿಂದಾಗಿ ಕರಾವಳಿ ಪ್ರದೇಶದಲ್ಲಿ ಗುರುವಾರದಿಂದ ಮಳೆ ಸುರಿಯುತ್ತಿದೆ.

Also Read  ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿ..! ➤ ಚಾಲಕನಿಗೆ ಗಾಯ

error: Content is protected !!
Scroll to Top