(ನ್ಯೂಸ್ ಕಡಬ) newskadaba.com ಮಂಗಳೂರು, ಆ .19, : ಜು.4ರಂದು ಬಿ. ಸಿ. ರೋಡ್‌ನಲ್ಲಿ ದುಷ್ಕರ್ಮಿಗಳ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಆರ್‌ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಜು. 7ರಂದು ಮೃತರಾಗಿದ್ದರು. ಇವರ ಶವಯಾತ್ರೆ ಸಂದರ್ಭ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ದಾಖಲಿಸಿದ್ದ ಎಫ್ಐಆರ್‌ಗೆ ಉಚ್ಛ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ.
ತಡೆಯಾಜ್ಞೆ ಹಿನ್ನೆಲೆಯಲ್ಲಿ ಬಂಟ್ವಾಳ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯಲಿರುವ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ, ಆಗಸ್ಟ್ 26ಕ್ಕೆ ವಿಚಾರಣೆ ಮುಂದೂಡಿದೆ. ಸತ್ಯಜಿತ್ ಸುರತ್ಕಲ್, ಹರೀಶ್ ಪೂಂಜ, ಶರಣ್ ಪಂಪ್ವೆಲ್, ಮುರಳೀಕೃಷ್ಣ ಹಸಂತಡ್ಕ ಸೇರಿ ಐವರು ಹಿಂದು ಮುಖಂಡರ ವಿರುದ್ಧ ಬಂಟ್ವಾಳ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಆದರೆ ತಮ್ಮ ವಿರುದ್ಧ ದಾಖಲಿಸಿದ್ದ ಎಫ್ಐಆರ್‌ಗೆ ಹಾಗೂ ವಿಚಾರಣೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಹಿಂದೂಪರ ಸಂಘಟನೆ ಮುಖಂಡರು ಹೈಕೋರ್ಟ್ ಮೆಟ್ಟಿಲೇರಿದ್ದರು.