ರಾಜ್ಯ ರಾಜಕಾರಣವನ್ನೇ ಬೆಚ್ಚಿ ಬೀಳಿಸಿದ ಬ್ರಹ್ಮಾಂಡ ಗುರೂಜಿಯ ಭವಿಷ್ಯ ➤ ಏನೆಂದು ತಿಳಿದರೆ ನೀವೂ ಬೆಚ್ಚಿಬೀಳೋದಂತೂ ಗ್ಯಾರಂಟಿ

(ನ್ಯೂಸ್ ಕಡಬ) newskadaba.com ಹಾಸನ, ಅ.18. ರಾಜ್ಯದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬರಲಿದ್ದು, ಅದರಲ್ಲಿ ಹೊಸಬರೇ ಮುಖ್ಯಮಂತ್ರಿ ಆಗಲಿದ್ದಾರೆ. ಈ ಹಿಂದೆ ಇದ್ದವರು ಯಾರೂ ಮುಂದಿನ ಸರಕಾರದಲ್ಲಿ ಮುಖ್ಯಮಂತ್ರಿ ಆಗಲ್ಲ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಶುಕ್ರವಾರವಾರದಂದು ಹಾಸನಾಂಬೆಯ ದರ್ಶನದ ಬಳಿಕ ಮಾತನಾಡಿದ ಬ್ರಹ್ಮಾಂಡ ಗುರೂಜಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ನವೆಂಬರ್ ತಿಂಗಳಿಂದ ಗಂಡಾಂತರವಿದ್ದು, ಈ ಅವಧಿಯಲ್ಲಿ ಅಪಮೃತ್ಯು ಗಂಡಾಂತರದಿಂದ ಪಾರಾದರೆ ಮುಂದಿನ ಎರಡು ಮುಕ್ಕಾಲು ವರ್ಷ ಮೋದಿಯವರು ಪ್ರಧಾನಿಯಾಗಿರುತ್ತಾರೆ. ಮುಂಬರುವ ಹತ್ತು ವರ್ಷಗಳ ಅವಧಿಯಲ್ಲಿ ಐದು ವರ್ಷ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದ ಅವರು
ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಪ್ರಕೃತಿ ವಿಕೋಪಗಳು ಆಗಲಿವೆ ಎಂದು ಎಚ್ಚರಿಸಿದರು.

Also Read  ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ

error: Content is protected !!
Scroll to Top