ನೆಲ್ಯಾಡಿ: ಅಕ್ರಮ ಜಾನುವಾರು ಸಾಗಾಟ ಪತ್ತೆಹಚ್ಚಿದ ಪೊಲೀಸರು ➤ 22 ಜಾನುವಾರುಗಳ ಸಹಿತ ಲಾರಿ ವಶಕ್ಕೆ, ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.19. ಹಾಸನದಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಬೆನ್ನಟ್ಟಿದ ನೆಲ್ಯಾಡಿ ಪೊಲೀಸರು ನೆಲ್ಯಾಡಿಯ ಕೋಲ್ಪೆ ಎಂಬಲ್ಲಿ ಲಾರಿಯನ್ನು ತಡೆಹಿಡಿದು ಲಾರಿಯಲ್ಲಿದ್ದ 22 ಜಾನುವಾರುಗಳನ್ನು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ ಘಟನೆ ಶನಿವಾರ ಮುಂಜಾನೆ ನಡೆದಿದೆ.

ಬಂಧಿತ ಆರೋಪಿಯನ್ನು ತುಮಕೂರು ನಿವಾಸಿ ನವಾಝ್ ಎಂದು ಗುರುತಿಸಲಾಗಿದೆ. ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ಪೋಲೀಸ್ ವಾಹನವನ್ನು ಕಂಡು ಪರಾರಿಯಾಗಲು ಯತ್ನಿಸಿದ ಲಾರಿಯನ್ನು ಬೆನ್ನಟಿದ ನೆಲ್ಯಾಡಿ ಪೊಲೀಸರು ಕೋಲ್ಪೆ ಎಂಬಲ್ಲಿ ವಾಹನವನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ 22 ಜಾನುವಾರುಗಳನ್ನು ಅಮಾನುಷವಾಗಿ ಸಾಗಿಸುತ್ತಿದ್ದುದು ಕಂಡುಬಂದಿದೆ.

Also Read  ಮಂಗಳೂರು: ಬೆಳ್ಳಂಬೆಳಗ್ಗೆ ಎಸ್ಡಿಪಿಐ ನಾಯಕನ ಮನೆಮೇಲೆ ಎನ್ಐಎ ದಾಳಿ ➤ ಸ್ಥಳದಲ್ಲಿ ಕಾರ್ಯಕರ್ತರ ಪ್ರತಿಭಟನೆ

error: Content is protected !!
Scroll to Top