ಸೌದಿಯಲ್ಲಿ ರಸ್ತೆ ಅಪಘಾತ ➤ ಮಂಗಳೂರಿನ ವ್ಯಕ್ತಿ ಮೃತ್ಯು



(ನ್ಯೂಸ್ ಕಡಬ) newskadaba.com ಮಂಗಳೂರು, ಅ.19. ಸೌದಿಯಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಮಂಗಳೂರಿನ ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ತಡರಾತ್ರಿ ನಡೆದಿದೆ.





ಮೃತ ವ್ಯಕ್ತಿಯನ್ನು ಮಂಗಳೂರು ಹೊರವಲಯದ ಪಡುಬಿದ್ರಿ ಸಮೀಪದ ಕಂಚಿನಡ್ಕ ನಿವಾಸಿ ಹಂಝ ಎಂಬವರ ಪುತ್ರ ಅಬ್ದುಲ್ ಖಾದರ್ (35) ಎಂದು ಗುರುತಿಸಲಾಗಿದೆ. ಸೌದಿಯಲ್ಲಿ ವ್ಯಾಪಾರ ಮಾಡಿಕೊಂಡಿದ್ದ ಖಾದರ್, ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಾರಿನ ಚಕ್ರ ಸ್ಪೋಟಗೊಂಡು ಈ ಅಪಘಾತ ಸಂಭವಿಸಿತ್ತು. ತೀವ್ರ ಗಾಯಗೊಂಡ ಖಾದರ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.






error: Content is protected !!
Scroll to Top