Breaking – ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ➤ ಶಿಕ್ಷಕಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಅ.19. ಪಾದಚಾರಿ ಶಿಕ್ಷಕಿಯೋರ್ವರಿಗೆ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರದಂದು ಸುಳ್ಯದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಸುಳ್ಯದ ಶಾಲಾ ಶಿಕ್ಷಕಿ ಮೀನಾಕ್ಷಿ ಎಂದು ಗುರುತಿಸಲಾಗಿದೆ. ಮೃತ‌ ಮೀನಾಕ್ಷಿಯವರು ಸುಳ್ಯದ ಹಳೇಗೇಟು ಸಮೀಪದ ವಿದ್ಯಾನಗರ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಗಮಿಸಿದ ಬಸ್ಸೊಂದು ಢಿಕ್ಕಿ ಹೊಡೆದುದರಿಂದ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಸುಳ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಸ್ಸು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

Scroll to Top