(ನ್ಯೂಸ್ ಕಡಬ) newskadaba.com ಮಂಗಳೂರು, ಆ .19, ಪತ್ನಿಯ ಶೀಲ ಶಂಕಿಸಿದ ಪತಿ ಮಹಾಶಯನೊಬ್ಬ ಆಕೆಯನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕೊಟ್ಟಾರ ಚೌಕಿಯ ಜೆ. ಬಿ. ಲೋಬೊ ರಸ್ತೆಯಲ್ಲಿ ವಾಸವಿದ್ದ ಬ್ಲೋಸಮ್ ಲೋಬೋ (31) ಕೊಲೆಯಾದ ಮಹಿಳೆಯಾಗಿದ್ದು, ಗಂಡ ವಿಲಿಯಮ್ ಲೋಬೋ (35) ಎಂಬಾತನೇ ಈ ಕೃತ್ಯ ಎಸಗಿದ್ದಾನೆ.
ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಬ್ಲೋಸಮ್ ಹಾಗೂ ಗಂಡ ವಿಲಿಯಂ ಲೋಬೊ ಮಧ್ಯೆ ಜಗಳ ಆರಂಭವಾಗಿದ್ದು, ಬಳಿಕ ಗಂಡ ಹೆಂಡತಿಯನ್ನು ಕೊಲೆ ಮಾಡಿ ಪೊಲೀಸರ ಬಳಿ ಬಂದಿದ್ದಾನೆ. ಕೊಲೆಗೆ ಅನೈತಿಕ ಸಂಬಂಧವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಮಹಿಳೆಯ ಶವವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಘಟನೆ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.