ಪೊಲೀಸ್ ಹುತಾತ್ಮರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.22. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಮಂಗಳೂರು ನಗರ ಪೊಲೀಸ್ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲಾ ಮೀಸಲು ಪಡೆ ಕಛೇರಿ ಆವರಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಕಡ್ಲೂರು ಸತ್ಯನಾರಾಯಣಾಚಾರ್ಯ, ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ಶ್ರೀ ಜೆ.ಅರುಣ್ ಚಕ್ರವರ್ತಿ ಐ.ಪಿ.ಎಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾದ ಶ್ರೀಮತಿ ಸಿಂಧೂ ಬಿ. ರೂಪೇಶ್ ಐ.ಎ.ಎಸ್ ಉಪಸ್ಥಿತರಿದ್ದರು. ಪೊಲೀಸ್ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಡಾ| ಹರ್ಷ ಪಿ. ಐ.ಪಿ.ಎಸ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಬಿ.ಎಂ ಲಕ್ಷ್ಮೀ ಪ್ರಸಾದ್  ಐ.ಪಿ.ಎಸ್ ಹಾಗೂ ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು  ಕಾರ್ಯಕ್ರಮದಲ್ಲಿ ಹಾಜರಿದ್ದರು.

Also Read  ಮರ್ದಾಳ ಘಟನೆ ಪೋಲೀಸರ ನಿಷ್ಕ್ರಿಯತೆಗೆ ಸಾಕ್ಷಿ ➤ ಅಬ್ದುಲ್ ಹಮೀದ್ ಮೆಜೆಸ್ಟಿಕ್ ಜಿಲ್ಲಾಧ್ಯಕ್ಷರು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ

 

 

error: Content is protected !!
Scroll to Top