ಕಡಬ: ಸರಕಾರಿ ಶಾಲೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ➤ ನಲಿ-ಕಲಿ ಕೊಠಡಿಯ ಬೀಗ ಮುರಿದ ಕಳ್ಳರು

(ನ್ಯೂಸ್ ಕಡಬ) newskadaba.com ಕಡಬ, ಅ.23. ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂತ್ರಡ್ಕ ಸರಕಾರಿ ಉನ್ನತ ಪ್ರಾಥಮಿಕ ಶಾಲಾ ಕೊಠಡಿಯ ಬೀಗ ಮುರಿದು ಕಳ್ಳತನ ಯತ್ನ ನಡೆದಿರುವುದು ಬುಧವಾರ ಬೆಳಕಿಗೆ ಬಂದಿದೆ.

ವಾರಗಳ ಹಿಂದೆ ಈ ಶಾಲಾ ಶಿಕ್ಷಕರ ಕೊಠಡಿಯ ಬೀಗ ಮುರಿದಿದ್ದ ಕಳ್ಳರು ಕಂಪ್ಯೂಟರ್ ಸಂಬಂಧಪಟ್ಟ ವಸ್ತುಗಳನ್ನು ದೋಚಿದ್ದರು. ಬುಧವಾರ ಶಾಲೆ ತೆರಿಯುತ್ತಿದ್ದಂತೆ ಶಾಲಾ ನಲಿಕಲಿ ಕೊಠಡಿಯ ಬೀಗ ಮುರಿದಿರುವುದು ಬೆಳಕಿಗೆ ಬಂದಿದ್ದು, ಯಾವುದೇ ಕಳ್ಳತನವಾಗಿಲ್ಲ. ಈ ಬಗ್ಗೆ ಶಾಲಾ ಮುಖ್ಯ ಶಿಕ್ಷಕ ಕುಸುಮಾಧರ ಕೆ. ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲೂಕು ಪಂಚಾಯಿತಿ ಸದಸ್ಯ ಫಝಲ್ ಕೋಡಿಂಬಾಳ, ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮಾಧವ ಭಟ್ ಉಪಸ್ಥಿತರಿದ್ದರು.

Also Read  ಬಂಟ್ವಾಳ: ಅಂತರ್ ಜಿಲ್ಲಾ ಆರೋಪಿಯ ಬಂಧನ

error: Content is protected !!
Scroll to Top