ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ದನ ➤ ಸಹ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಅ.23. ದನವೊಂದು ಅಡ್ಡ ಬಂದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರನೋರ್ವ ಬಿದ್ದು ಗಾಯಗೊಂಡ ಘಟನೆ ಉಪ್ಪಿನಂಗಡಿ – ಕಡಬ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರದಂದು ನಡೆದಿದೆ.

ಗಾಯಗೊಂಡವರನ್ನು ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ನಿವಾಸಿ ವಿಶ್ವನಾಥ ಗೌಡ ಎಂದು ಗುರುತಿಸಲಾಗಿದೆ. ಇವರು ಮೋಹನ್ ಎಂಬವರೊಂದಿಗೆ ಮೋಟಾರ್ ಸೈಕಲ್ ನಲ್ಲಿ ಪುತ್ತೂರಿನಿಂದ ಉಪ್ಪಿನಂಗಡಿ ಮಾರ್ಗವಾಗಿ ಉಪ್ಪಿನಂಗಡಿ – ಕಡಬ ರಾಜ್ಯ ರಸ್ತೆಯಲ್ಲಿ ಬರುತ್ತಿರುವಾಗ ದನವೊಂದು ಅಡ್ಡ ಬಂದ ಪರಿಣಾಮ ಮೋಹನ್ ರವರು ಹಠಾತ್ತನೆ ಬ್ರೇಕ್ ಹಾಕಿದ್ದು, ಹಿಂಬದಿಯಲ್ಲಿ ಕುಳಿತಿದ್ದ ವಿಶ್ವನಾಥ ಗೌಡ ರವರು ಡಾಮಾರು ರಸ್ತೆಗೆ ಬಿದ್ದ ಪರಿಣಾಮ ಕೂಡಲೇ ಖಾಸಗಿ ವಾಹನವೊಂದರಲ್ಲಿ ಉಪ್ಪಿನಂಗಡಿಯ ಖಾಸಗಿ ಕ್ಲಿನಿಕ್ ನಲ್ಲಿ ಪ್ರಥಮ ಚಿಕಿತ್ಸೆ ಮಾಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಿ,ಸಿ ರೋಡ್ ನಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಸಬಳೂರು: 34 ಲಕ್ಷ ವೆಚ್ಚದ ಕಿಂಡಿ ಅಣೆಕಟ್ಟು ಹಾಗೂ ಸೇತುವೆ ನಿರ್ಮಾಣ ► ಸುಳ್ಯ ಶಾಸಕ ಅಂಗಾರರಿಂದ ಕಾಮಗಾರಿ ಪರಿಶೀಲನೆ

 

error: Content is protected !!
Scroll to Top