ಕಾಂಗ್ರೆಸ್ ಮುಖಂಡ ಡಿಕೆಶಿಗೆ ಜಾಮೀನು ➤ 50 ದಿನಗಳ ಜೈಲು ವಾಸಕ್ಕೆ ಕೊನೆಗೂ ಮುಕ್ತಿ

(ನ್ಯೂಸ್ ಕಡಬ) newskadaba.com ನವದೆಹಲಿ: .23 ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್  ಜಾಮೀನು ಮಂಜೂರು ಮಾಡಿದೆ.

ಕಳೆದ 50 ದಿನಗಳಿಂದ ತಿಹಾರ್ ಜೈಲಿನಲ್ಲಿದ್ದ ಡಿಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ವಶಕ್ಕೆ ಪಡೆದಿತ್ತು. ಈ ಹಿಂದೆ ಹಲವು ಬಾರಿ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತು ವಾದ, ಪ್ರತಿವಾದ ಆಲಿಸಿದ್ದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಅವರು ಬುಧವಾರದಂದು ಶರತ್ತುಬದ್ಧ ಜಾಮೀನು ಮಂಜೂರುಗೊಳಿಸಿ ಆದೇಶ ನೀಡಿದರು.

 

Scroll to Top