ಕರಾವಳಿಯಾದ್ಯಂತ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.23. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಕ್ಟೋಬರ್ 25ರ ವರೆಗೆ ಕರಾವಳಿ ಜಿಲ್ಲೆಯಾದ್ಯಂತ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಿಸಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ ಎರಡು ದಿವಸಗಳ ಕಾಲ ಬಿರುಸಿನಿಂದ ಕೂಡಿದ

ಮಳೆ ಗುಡುಗು, ಸಿಡಿಲು ಸಹಿತ ಜೋರಾಗಿ ಗಾಳಿ ಬೀಸಲಿದ್ದು, ಸಮುದ್ರದಲ್ಲಿ ಅಲೆಗಳ  ಅಬ್ಬರ ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಂಗಳವಾರದಂದು ಭಾರೀ ಮಳೆಯಾಗಬಹುದೆಂದು ಆರೆಂಜ್ ಅಲರ್ಟ್ ಘೋಷಿಸಿತ್ತಾದರೂ ಮಂಗಳೂರು ನಗರದಾದ್ಯಂತ ಅಲ್ಪ ಪ್ರಮಾಣದ ಮೋಡ ಕವಿದ ವಾತಾವರಣ ಸೃಷ್ಟಿಯಾಗಿತ್ತು. ಉಡುಪಿ ಜಿಲ್ಲೆಯಾದ್ಯಂತ ಮಂಗಳವಾರ ಉತ್ತಮ ಮಳೆಯಾಗಿದೆ.

Also Read  ನರಿಮೊಗರು : ಯುವತಿ ಮಂಡಲದಿಂದ  ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ

error: Content is protected !!
Scroll to Top