ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನ ➤ ಆರೋಪಿಯನ್ನು ಬಂಧಿಸಿದ ಸಾರ್ವಜನಿಕರು

(ನ್ಯೂಸ್ ಕಡಬ) newskadaba.com ಕಡಬ, ಅ.23. ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರದಂದು ಸುಬ್ರಹ್ಮಣ್ಯ ರೋಡ್ – ಮಂಗಳೂರು ರೈಲಿನಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಬೆಂಗಳೂರಿನ ಕೆಂಗೇರಿ ನಿವಾಸಿ ಮಂಜು(27) ಎಂದು ಗುರುತಿಸಲಾಗಿದೆ. ನೆಟ್ಟಣದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲಿನ ಮಹಿಳಾ ಬೋಗಿಗೆ ಹತ್ತಿದ ಆರೋಪಿಯು ಮಹಿಳೆ ಒಬ್ಬರೇ ಇರುವುದನ್ನು ಕಂಡು ಮಾನಭಂಗಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆಯು ಚೈನ್ ಎಳೆದು ರೈಲನ್ನು ನಿಲ್ಲಿಸಿದ್ದಾರೆ. ತಕ್ಷಣವೇ ಹಾರಿ ಪರಾರಿಯಾದ ಆರೋಪಿಯನ್ನು ಕೋಡಿಂಬಾಳದಲ್ಲಿ ಸಾರ್ವಜನಿಕರು ಹಿಡಿದು ಕಡಬ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಡಬ ಪೊಲೀಸರು ಆರೋಪಿಯನ್ನು ರೈಲ್ವೇ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Also Read  ಜೂ. 27ರೊಳಗೆ ಪಡಿತರ ಪಡೆಯಲು ಸೂಚನೆ

error: Content is protected !!
Scroll to Top