ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ➤ ಜಿಲ್ಲೆಯಾದ್ಯಂತ ನಾಳೆ (ಅ.25) ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.24. ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ರೆಡ್ ಅಲೆರ್ಟ್ ಘೋಷಿಸಲಾಗಿದ್ದು, ನಾಳೆ (ಅ.25) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಅರಬ್ಬೀ ಸಮುದ್ರ ಹಾಗೂ ಲಕ್ಷ ದ್ವೀಪಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿಯಲ್ಲಿ ಬುಧವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ. ಈ ಸಂದರ್ಭದಲ್ಲಿ ಪ್ರವಾಸಿಗರು/ಸಾರ್ವಜನಿಕರು ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಪ್ರಾಕೃತಿಕ ವಿಕೋಪ ಸಂಬಂಧಿ ಯಾವುದೇ ಸಮಸ್ಯೆಗಳಿಗೆ ಟೋಲ್ ಫ್ರೀ ನಂ. 1077 ಸಂಪರ್ಕಿಸಲು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶದಲ್ಲಿ ತಿಳಿಸಿದ್ದಾರೆ.

Also Read  ಉಕ್ರೇನ್ ನಲ್ಲಿ ಕರ್ನಾಟಕದ ವಿದ್ಯಾರ್ಥಿ ಬಲಿ ➤ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ಮೊಂಬತ್ತಿ ಬೆಳಗಿಸಿ ಪ್ರತಿಭಟನೆ

error: Content is protected !!
Scroll to Top