(ನ್ಯೂಸ್ ಕಡಬ) newskadaba.com ಮಂಗಳೂರು, ಅ.25. ಅರಬ್ಬೀ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪ್ರಭಾವದಿಂದ ಕೇರಳ, ಕರ್ನಾಟಕ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಅಲ್ಲಲ್ಲಿ ಮುಂದಿನ ಎರಡು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ರೆಡ್ ಅಲರ್ಟ್(115.5 ಮಿ ಮೀ ನಿಂದ 204.4 ಮಿ ಮೀ ವರೆಗೆ ಮಳೆ ಬೀಳುವ ಸಾಧ್ಯತೆ) ಸೂಚನೆ ನೀಡಿದೆ.
ಸಾರ್ವಜನಿಕರು ಈ ಅವಧಿಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮವಹಿಸುವಂತೆ ಎಚ್ಚರಿಕೆ ನೀಡಲಾಗಿದೆ ಹಾಗೂ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24×7 ಕಂಟ್ರೋಲ್ ರೂಮ್-1077, ವಾಟ್ಸ್‍ಆಪ್ ನಂಬರ್- 9483908000 ಸಂಪರ್ಕಿಸುವಂತೆ ಅಧ್ಯಕ್ಷರು/ಜಿಲ್ಲಾಧಿಕಾರಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ದ.ಕ. ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.