ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ಸತೀಶ್ ಕುಮಾರ್ ಬೆಂಗಳೂರಿಗೆ ವರ್ಗಾವಣೆ ➤ ನೂತನ ವೃತ್ತ ನಿರೀಕ್ಷಕರಾಗಿ ನವೀನ್ ಚಂದ್ರ ನೇಮಕ

(ನ್ಯೂಸ್ ಕಡಬ) newskadaba.com ಸುಳ್ಯ, ಅ.26. ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರ್.ಸತೀಶ್ ಕುಮಾರ್ ಅವರನ್ನು ಬೆಂಗಳೂರು ಪೊಲೀಸ್ ಪ್ರಧಾನ ಕಚೇರಿಗೆ ವರ್ಗಾಯಿಸಿ ಸರಕಾರವು ಆದೇಶ ಹೊರಡಿಸಿದೆ.

ರಾಜ್ಯ ಗುಪ್ತ ವಾರ್ತೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ನವೀನ್ ಚಂದ್ರ ಜೋಗಿಯವರನ್ನು ಸುಳ್ಯದ ನೂತನ ವೃತ್ತ ನಿರೀಕ್ಷಕರಾಗಿ ನೇಮಿಸಲಾಗಿದ್ದು, ಇನ್ನೆರಡು ದಿನಗಳಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.

Scroll to Top