ನ.01 ರಿಂದ ಅಂಗಡಿಗಳ ನಾಮಫಲಕದಲ್ಲಿ ಕನ್ನಡ ಕಡ್ಡಾಯ ➤ ಇಲ್ಲದಿದ್ದರೆ ಲೈಸೆನ್ಸ್ ಕ್ಯಾನ್ಸೆಲ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ನವೆಂಬರ್‌ 1ರಿಂದ ನಗರದ ಎಲ್ಲ ಅಂಗಡಿ ಮುಂಗಟ್ಟುಗಳು, ಹೋಟೆಲ್‌ಗ‌ಳು ಹಾಗೂ ಖಾಸಗಿ ಕಂಪನಿಗಳು ಕನ್ನಡ ನಾಮಫಲಕ ಅಳವಡಿಸುವುದು ಕಡ್ಡಾಯ ಎಂದು ಬಿಬಿಎಂಪಿ ಆಯುಕ್ತ ಅನಿಲ್‌ ಕುಮಾರ್‌ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಕನ್ನಡ ಭಾಷೆಯನ್ನು ನಾಮಫ‌ಲಕಗಳಲ್ಲಿ ನೀಡದಿದ್ದರೆ ಅಂತಹ ಮಳಿಗೆಗಳ ಪರವಾನಗಿಯನ್ನು ರದ್ದುಗೊಳಿಸ ಲಾಗುವುದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.

ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯ ಬಳಕೆ ಬಳಕೆಯಾಗಬೇಕು, ಹಾಗೂ ನಾಮ ಫಲಕಗಳಲ್ಲಿ ಕನ್ನಡ ಪದಗಳು ಸ್ಪಷ್ಟವಾಗಿ ಕಾಣುವಂತೆ ಮುದ್ರಿಸಬೇಕು ಎಂದು ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಹೊಸದಾಗಿ ಪರವಾನಗಿ ಅರ್ಜಿ ಸಲ್ಲಿಸುವಂತಹ ಅರ್ಜಿದಾರರಿಗೂ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Also Read  ಸುಳ್ಯ: ಟೆರೇಸ್ ಮೇಲಿಂದ ಬಿದ್ದು ವ್ಯಕ್ತಿ ಗಂಭೀರ

ಈ ಹಿಂದೆ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗೂ ಕೆಲವು ಕನ್ನಡಪರ ಸಂಘಟನೆಗಳು ಮೇಯರ್‌ ಸೇರಿದಂತೆ ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರು.

ಮೇಯರ್‌ ಗೌತಮ್‌ ಕುಮಾರ್‌ ಅವರು ಅಧಿಕಾರ ಸ್ವೀಕರಿಸಿದ ನಂತರ ನವೆಂಬರ್ 1ರಿಂದ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಲಾಗುವುದು ಎಂದು ಘೋಷಿಸಿದ್ದರು. ಇದರ ಬೆನ್ನಲ್ಲೇ ಆಯುಕ್ತ ಅನಿಲ್‌ ಕುಮಾರ್‌ ಅವರು ನ.1ರಿಂದ ಕನ್ನಡ ಭಾಷೆ ಕಡ್ಡಾಯಕ್ಕೆ ಆದೇಶ ಹೊರಡಿಸಿದ್ದಾರೆ.

error: Content is protected !!
Scroll to Top