ಖಾಸಗಿ ಬಸ್ – ಲಾರಿ ನಡುವೆ ಢಿಕ್ಕಿ: ಚಾಲಕ ಸ್ಥಳದಲ್ಲೇ ಮೃತ್ಯು ➤ ಕ್ಷಣಮಾತ್ರದಲ್ಲಿ ಬೆಂಕಿ ಹೊತ್ತಿ ಉರಿದ ಬಸ್

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಅ.27. ಖಾಸಗಿ ಬಸ್ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಹಲವರು ಗಾಯಗೊಂಡ ಘಟನೆ ಭಾನುವಾರದಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದಿದೆ.

ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಿರಿಯೂರು ತಾಲೂಕಿನ ಕಪಿಲೆಹಟ್ಟಿ ಎಂಬಲ್ಲಿಗೆ ತಲುಪಿದಾಗ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಲಾರಿ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಲಾರಿ ಚಾಲಕ ವೆಂಕಟೇಶ್ (40) ಸ್ಥಳದಲ್ಲೇ ಮೃತಪಟ್ಟು, ಬಸ್ಸಿನಲ್ಲಿದ್ದ ಹತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ತಕ್ಷಣವೇ ಪ್ರಯಾಣಿಕರು ಬಸ್ಸಿನಿಂದ ಇಳಿದಿದ್ದಾರೆ. ಕ್ಷಣಮಾತ್ರದಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಹೆಚ್ಚಿನ ಪ್ರಾಣಹಾನಿ ತಪ್ಪಿ ಹೋಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಕರ್ನಾಟಕದಲ್ಲಿ ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು - ಸಿಎಂ ಸಿದ್ದರಾಮಯ್ಯ

error: Content is protected !!
Scroll to Top