ನಾಡಿಗೆ ಬಂದ ಕಾಡಾನೆ – ಉಪ ವಲಯ ಅರಣ್ಯಾಧಿಕಾರಿ ಮೇಲೆ ದಾಳಿ ➤ ಆನೆಯನ್ನು ಮರಳಿ ಕಾಡಿಗಟ್ಟುತ್ತಿದ್ದ ವೇಳೆ ಘಟನೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಅ.28. ಉಪ ವಲಯ ಅರಣ್ಯಾಧಿಕಾರಿ ಓರ್ವರ ಮೇಲೆ ಕಾಡಾನೆ ದಾಳಿ ನಡೆಸಿದ್ದರಿಂದ ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭೈರಾಪುರ ಎಂಬಲ್ಲಿ ಕಾಡಾನೆಯೊಂದು ನಾಡಿಗೆ ಆಗಮಿಸಿದ್ದು, ಸೋಮವಾರದಂದು ಅರಣ್ಯಾಧಿಕಾರಿಗಳು ಆನೆಯನ್ನು ಮರಳಿ ಕಾಡಿಗಟ್ಟುವ ಕಾರ್ಯಾಚರಣೆ ನಡೆಸುತ್ತಿದ್ದರು‌. ಈ ವೇಳೆ ಉಪ ವಲಯ ಅರಣ್ಯಾಧಿಕಾರಿ ಚೇತನ್ ಮೇಲೆ ಆನೆಯು ದಾಳಿ ನಡೆಸಿದ್ದರಿಂದ, ಚೇತನ್ ಗಂಭೀರ ಗಾಯಗೊಂಡಿದ್ದು, ಅವರನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!
Scroll to Top