ದೇಶದೆಲ್ಲೆಡೆ ದೀಪಾವಳಿ ಸಂಭ್ರಮ ➤ ವಿವಿಧೆಡೆ ಅಗ್ನಿ ಅನಾಹುತ

(ನ್ಯೂಸ್ ಕಡಬ) newskadaba.com, ನವದೆಹಲಿ ಅ.28. ದೀಪಾವಳಿ ಸಂಭ್ರಮದ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಹಲವಾರು ಅಗ್ನಿ ಅನಾಹುತ ಸಂಭವಿಸಿದ್ದು, ನೂರಾರು ಆಸ್ತಿ-ಪಾಸ್ತಿ ಬೆಂಕಿಗೆ ಆಹುತಿಯಾಗಿರುವ ಘಟನೆ ವರದಿಯಾಗಿದೆ.

ಒಡಿಶಾದ ಸಂಬಾಲ್ ಪುರ್ ಜಿಲ್ಲೆಯ ತರಕಾರಿ ಮಾರುಕಟ್ಟೆಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭಾರೀ ಬೆಂಕಿಯಿಂದಾಗಿ ಸುಮಾರು 80ಕ್ಕೂ ಅಧಿಕ ಅಂಗಡಿಗಳು ಸುಟ್ಟು ಹೋಗಿದ್ದು, ದೀಪಾವಳಿ ಹಬ್ಬದ ನಿಟ್ಟಿನಲ್ಲಿ ಅಂಗಡಿ ಮುಂಭಾಗದಲ್ಲಿ ಹಚ್ಚಿಟ್ಟ ಹಣತೆಯ ಬೆಂಕಿಯಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಭಾನುವಾರ ಮುಂಜಾನೆ ದೆಹಲಿಯ ಸಾದಾರ್ ಬಜಾರ್ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಪ್ಯಾಕ್ ಮಾಡುವ ಸಾಮಾಗ್ರಿಗಳು ಸುಟ್ಟು ಭಸ್ಮವಾಗಿರುವುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಆಗಮಿಸಿದ 12ಕ್ಕೂ ಅಧಿಕ ಅಗ್ನಿಶಾಮಕ ದಳ ತಕ್ಷಣ ಕಾರ್ಯಪ್ರವೃತ್ತರಾಗಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿ, ಸುಮಾರು ಒಂದೂವರೆ ಗಂಟೆಗಳ ಕಾಲ ಸತತ ಕಾರ್ಯಾಚರಣೆ ಮೂಲಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿರುವುದಾಗಿ ವರದಿಯಾಗಿದೆ.

Also Read  ಮತ್ತೊಂದು ಯಶಸ್ವಿ ಹೆಜ್ಜೆಯತ್ತ 'ಚಂದ್ರಯಾನ- 3' - 3ನೇ ಕಕ್ಷೆಗೆ ಎಂಟ್ರಿ ಕೊಟ್ಟ ಬಾಹ್ಯಾಕಾಶ ನೌಕೆ

ಮುಂಬೈಯ ಸಯಾನ್ ಜಿಲ್ಲೆಯಲ್ಲಿನ ಪ್ಲಾಸ್ಟಿಕ್ ತಯಾರಿಕಾ ಗೋದಾಮಿನಲ್ಲಿ ಬೆಂಕಿ ಅನಾಹುತ ಸಂಭವಿಸಿರುವ ಪ್ರಕರಣ ವರದಿಯಾಗಿದ್ದು,ತಕ್ಷಣ ಘಟನಾ ಸ್ಥಳಕ್ಕೆ ದೌಡಾಯಿಸಿದ ನಾಲ್ಕು ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿರುವುದಾಗಿ ವರದಿ ತಿಳಿಸಿದೆ.

error: Content is protected !!
Scroll to Top