(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.29 ನಮ್ಮ ರಾಜ್ಯದಲ್ಲಿ ಮೂರು ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಪ್ರತಿ ಕಾಲೇಜಿಗೆ 325 ಕೋಟಿ ರೂ. ಅನುದಾನ ಪ್ರಕಟಿಸಿದೆ.
ಚಿಕ್ಕಮಗಳೂರು, ಹಾವೇರಿ ಮತ್ತು ಯಾದಗಿರಿ ಜಿಲ್ಲೆಗಳ ಜಿಲ್ಲಾ ಆಸ್ಪತ್ರೆಗಳಿಗೆ ಹೊಂದಿಕೊಂಡಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ನೂತನ ಕಾಲೇಜುಗಳು ಸ್ಥಾಪನೆಯಾಗಲಿವೆ. ಇದಕ್ಕಾಗಿ ಕೇಂದ್ರ ಸರ್ಕಾರ ಶೇ.60 ಹಾಗೂ ರಾಜ್ಯ ಸರ್ಕಾರ ಶೇ.40 ವೆಚ್ಚ ಭರಿಸಬೇಕಿದೆ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಪ್ರಸ್ತುತ ಸರ್ಕಾರಿ ಮತ್ತು ಖಾಸಗಿ ಸೇರಿ 50 ವೈದ್ಯಕೀಯ ಕಾಲೇಜುಗಳಿವೆ. ನೂತನ ಕಾಲೇಜುಗಳ ಸ್ಥಾಪನೆ ಸಂಬಂಧ ಶೀಘ್ರದಲ್ಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಒಡಂಬಡಿಕೆ ಆಗಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.