ನೂಜಿಬಾಳ್ತಿಲ ಬೆಥನಿ ಪಿಯು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಜೋಸೆಫ್ ಟಿ.ಜೆ. ವಿಧಿವಶ

(ನ್ಯೂಸ್ ಕಡಬ) newskadaba.com ಕಡಬ, ಅ.29. ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾಗಿದ್ದ ಜೋಸೆಫ್ ಟಿ.ಜೆಯವರು ಹೃದಯಾಘಾತದಿಂದ ಮಂಗಳವಾರದಂದು ನಿಧನ ಹೊಂದಿದರು.

ಮಂಗಳವಾರ ಬೆಳಿಗ್ಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತಾದರೂ ಅದಾಗಲೇ ಹೃದಯಘಾತದಿಂದ ನಿಧನ ಹೊಂದಿದ್ದರು. ಮೃತರ ಅಂತ್ಯಸಂಸ್ಕಾರವು ಅಕ್ಟೋಬರ್ 30 ರಂದು ಕುಟ್ರುಪ್ಪಾಡಿ ಸೈಂಟ್ ಮೇರಿಸ್ ಚರ್ಚ್‌ನಲ್ಲಿ ನಡೆಯಲಿದ್ದು, ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಧ್ಯಕ್ಷರಾದ ವಂದನೀಯ ಲಾರೆನ್ಸ್ ಮುಕ್ಕುಯಿರವರ ನೇತೃತ್ವದಲ್ಲಿ ನಡೆಯಲಿದೆ.

Also Read  The Benefits of Online Board Management

error: Content is protected !!
Scroll to Top