(ನ್ಯೂಸ್ ಕಡಬ) newskadaba.com ಬೆಳಗಾವಿ, ಅ.29 ರಾಜ್ಯ ಭಾಷೆಯಾದ ಕನ್ನಡವನ್ನು ರೈಲ್ವೆ ಮಂಡಳಿಯ ಆಡಳಿತ ವ್ಯವಸ್ಥೆಯಲ್ಲಿ ಪ್ರಾದೇಶಿಕ ಭಾಷೆಯಾಗಿ ಜಾರಿಗೆ ತರಲಾಗುವುದು ಎಂದು ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಹೇಳಿದರು.
ಮುಂದಿನ ದಿನಗಳಲ್ಲಿ ಕನ್ನಡ ಭಾಷೆಯನ್ನು ಬಲ್ಲ ಅಧಿಕಾರಿಗಳನ್ನೇ ರಾಜ್ಯದಲ್ಲಿ ನೇಮಕ ಮಾಡಲಾಗುವುದು. ಇದಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಸುರೇಶ ಅಂಗಡಿ ತಿಳಿಸಿದರು. ರಾಜ್ಯದ ಎಲ್ಲ ರೈಲು ನಿಲ್ದಾಣಗಳಲ್ಲಿ ಈಗಾಗಲೇ ಕನ್ನಡದಲ್ಲೇ ಮಾಹಿತಿ ನೀಡಲಾಗುತ್ತಿದೆ. ದೇಶದಲ್ಲಿರುವ ರೈಲು ನಿಲ್ದಾಣಗಳಿಗೆ ವಿದೇಶಿ ಜನರು ಬರುವುದರಿಂದ , ರಾಷ್ಟ್ರೀಯ ಭಾಷೆ ಹಿಂದಿ ಮತ್ತು ಇದಕ್ಕೆ ಪೂರಕವಾಗಿ ಇಂಗ್ಲಿಷ್ ಬಳಸಲಾಗುತ್ತಿದೆ. ಆದರೂ ರಾಜ್ಯದ ಮಟ್ಟಿಗೆ, ಕನ್ನಡ ಬಳಕೆಗೆ ಆದ್ಯತೆ ನೀಡುವ ನಿಯಮಗಳನ್ನು ರೂಪಿಸಲಾಗುವುದು ಎಂದರು.