ಕಡಬ: ಕಾರು – ಬೈಕ್ ಢಿಕ್ಕಿ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಅ.30. ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಕಡಬದ ಕಾಲೇಜು ಕ್ರಾಸ್ ಬಳಿ ಬುಧವಾರ ಸಂಜೆ ನಡೆದಿದೆ.

ಗಾಯಾಳು ಸವಾರನನ್ನು ಕಡಬ ಸಮೀಪದ ಪಣೆಮಜಲು ನಿವಾಸಿ ನಾರಾಯಣ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ತನ್ನ ದ್ವಿಚಕ್ರ ವಾಹನದಲ್ಲಿ ಸರ್ಕಾರಿ ಕಾಲೇಜು ಕಡೆಯಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ವೇಳೆ ಸುಬ್ರಹ್ಮಣ್ಯದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಮಾರುತಿ ಎ-ಸ್ಟಾರ್ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಗಂಭೀರ ಗಾಯಗೊಂಡ ನಾರಾಯಣ ಶೆಟ್ಟಿಯವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಕಡಬ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ವಿದ್ಯುತ್ ಸ್ಥಾವರದಲ್ಲಿ ಉದ್ಯೋಗ ಭರವಸೆ ನೀಡಿ ವಂಚನೆ ➤ ಕಿಲಾಡಿ ವಂಚಕ ಪೊಲೀಸ್ ಬಲೆಗೆ

error: Content is protected !!
Scroll to Top