ಮದುಮಗಳು ಚೆನ್ನಾಗಿದ್ರೆ ಗಂಡ್ಮಕ್ಳು ಜಾಸ್ತಿ ಬರ್ತಾರೆ ► ಜೆಡಿಎಸ್ ಗಾಳ ಹಾಕಿದ್ದನ್ನು ಪರೋಕ್ಷವಾಗಿ ಒಪ್ಪಿಕೊಂಡ ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.19. ಮೇಲ್ಮನೆಯ ಒಂದು ಸ್ಥಾನಕ್ಕೆ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಕೇಂದ್ರದ ಮಾಜಿ ಸಚಿವ ಸಿ.ಎಂ ಇಬ್ರಾಹಿಂ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಘಟನೆ ಶನಿವಾರದಂದು ನಡೆದಿದೆ.

ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರದಂದು ಮುಖ್ಯಮಂತ್ರಿಯವರಿಗೆ ರಾಜೀನಾಮೆ ಪತ್ರವನ್ನು ಸಮರ್ಪಿಸಿದ್ದೇನೆ. ಸೋಮವಾರದಂದು ಮೇಲ್ಮನೆ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದು, ಈ ಸಂಬಂಧ ಪಕ್ಷದ ಅಧ್ಯಕ್ಷರ ಜೊತೆ ಚರ್ಚೆ ನಡೆಸಿದ್ದೇನೆ ಎಂದರು. ಜೆಡಿಎಸ್ ಸೇರುವ ಮೂನ್ಸೂಚನೆ ಸಿಕ್ಕಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಜವಾಬ್ದಾರಿ ನೀಡಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಮದುಮಗಳು ಚೆನ್ನಾಗಿ ಇದ್ರೆ, ಗಂಡುಗಳು ಜಾಸ್ತಿ ಬರ್ತಾರೆ ಎಂದು ಹೇಳುವ  ಮೂಲಕ ಜೆಡಿಎಸ್ ತನ್ನು ಪಕ್ಷಕ್ಕೆ ಆಹ್ವಾನಿಸಿದ್ದನ್ನು ಪರೋಕ್ಷವಾಗಿ ಸಿಎಂ ಇಬ್ರಾಹಿಂ ಒಪ್ಪಿಕೊಂಡಿದ್ದಾರೆ.

error: Content is protected !!
Scroll to Top