ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com  ಮಂಗಳೂರು,  ನ.1  ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಸ್ಕೂಲ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪ.ಪೂ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿ ಆಚರಿಸಲಾಯಿತು.


ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಧನಂಜಯ ಕುಂಬ್ಳೆ ಅವರು ಅತಿಥಿಯಾಗಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ರಾಜ್ಯೋತ್ಸವ ಸಂದೇಶವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತಗಾರ ಕೆ.ಸಿ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಆಡಳಿತ ಮಂಡಳಿ ಸದಸ್ಯೆ ಶ್ರೀಮತಿ ಸುಗಣ ಸಿ ನಾಯಕ್, ಪ್ರಧಾನ ಸಲಹೆಗಾರ ರಮೇಶ್ ಕೆ, ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಶಕ್ತಿ ಪ ಪೂ ಕಾಲೇಜಿನ ಪ್ರಾಚಾರ್ಯ ಪ್ರಭಾಕರ ಜಿ.ಎಸ್, ಶ್ರೀ ಗೋಪಾಲಕೃಷ್ಣ ಪ್ರಿ ಸ್ಕೂಲ್ ಸಂಚಾಲಕಿ ನೀಮಾ ಸಕ್ಸೇನಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಕನ್ನಡ ಗಾಯನ ಹಾಗೂ ನೃತ್ಯವನ್ನು ಮಾಡಿದರು.

Also Read  ಕಾರ್ಕಳ: ಡೆತ್‌ ನೋಟ್‌ ಬರೆದಿಟ್ಟು ಅವಿವಾಹಿತ ವೃದ್ಧ ಆತ್ಮಹತ್ಯೆ

error: Content is protected !!
Scroll to Top