(ನ್ಯೂಸ್ ಕಡಬ) newskadaba.com ಪಡುಬಿದ್ರೆ, ಆ.19. ಠಾಣಾ ವ್ಯಾಪ್ತಿಯ ಎರ್ಮಾಳು ರಾಷ್ಟ್ರೀಯ ಹೆದ್ದಾರಿಯ ಸಮೀಪದ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಲಾರಿಗೆ ಮೀನು ಸಾಗಾಟದ ಟೆಂಪೊ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ಮೀನು ಸಾಗಿಸುತ್ತಿದ್ದ ಈಚರ್ ಟೆಂಪೊ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿದ್ದ ಇನ್ನೊಂದು ಲಾರಿಯ ಚಾಲಕ ಮೃತಪಟ್ಟಿದ್ದು, ಟೆಂಪೊ ಚಾಲಕ ಸೇರಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.