ಗಡಿನಾಡು ಸಂಸ್ಕೃತಿ ಉತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ನ.5    ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಕರ್ನಾಟಕ ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ನವೆಂಬರ್ 5 ಮಂಗಳವಾರದಿಂದ ನವೆಂಬರ್ 7ರವರೆಗೆ ಮೂರು ದಿನಗಳ ಗಡಿನಾಡು ಸಂಸ್ಕೃತಿ ಉತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಮಂಗಳೂರು ಪುರಭವನದಲ್ಲಿ ನಡೆಯಲಿದೆ.


ಗಡಿನಾಡು ಸಂಸ್ಕೃತಿ ಉತ್ಸವ ಉದ್ಘಾಟನೆಯನ್ನು ನವೆಂಬರ್ 5ರಂದು ಸಂಜೆ 4 ಗಂಟೆಗೆ ದಕ್ಷಿಣ ಕನ್ನಡ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ ನೆರವೇರಿಸಲಿದ್ದಾರೆ. ಗಡಿನಾಡು ಸಂಸ್ಕೃತಿ ಉತ್ಸವದ ಅಂಗವಾಗಿ ಮೂರು ದಿನಗಳ ಕಾಲ ಪ್ರತಿದಿನ ಸಂಜೆ ಯಕ್ಷಗಾನ ಸೇರಿದಂತೆ ವೈವಿಧ್ಯಮಯ ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

error: Content is protected !!

Join the Group

Join WhatsApp Group