Breaking – ಸುಬ್ರಹ್ಮಣ್ಯ: ಕಾರು ಹಾಗೂ ಬೈಕ್ ಮೇಲೆ ಬಿದ್ದ ಬೃಹತ್ ಮರ ➤ ಕಾರು ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.06. ಕಡಬ ತಾಲೂಕಿನ ವಿವಿಧೆಡೆ ಬುಧವಾರ ಸಂಜೆಯಿಂದ ಸುರಿದ ಭಾರೀ ಗಾಳಿ ಮಳೆಗೆ ಕಾರು ಹಾಗೂ ಬೈಕ್ ಗಳೆರಡರ ಮೇಲೆ ಮರ ಬಿದ್ದು, ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ ಸಮೀಪದ ಬಳ್ಪ ಎಂಬಲ್ಲಿ ನಡೆದಿದೆ.

ಬುಧವಾರ ಸಂಜೆ ಕಡಬ ಪರಿಸರದಲ್ಲಿ ವ್ಯಾಪಕ ಮಳೆಯಾಗಿರುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗಿದ್ದು ವಿವಿಧೆಡೆ ಮರಗಳು ಧರಾಶಾಹಿಯಾಗಿವೆ. ಬಳ್ಪದಲ್ಲಿ ಬೃಹತ್ ಗಾತ್ರದ ಮರ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಗಾಯಾಳು ಚಾಲಕನನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ► ಸಾಂತೋಮ್ ವಿದ್ಯಾನಿಕೇತನ ತಾಲೂಕು ಮಟ್ಟಕ್ಕೆಆಯ್ಕೆ

error: Content is protected !!
Scroll to Top