ಶಕ್ತಿ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.7  ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿಯುತ ಶಾಲೆ ಹಾಗೂ ಶಕ್ತಿ ಪ.ಪೂ ಕಾಲೇಜು ವತಿಯಿಂದ ನವಂಬರ್ 8ರಂದು ಬೆಳಗ್ಗೆ 9 ಗಂಟೆಗೆ ವಾರ್ಷಿಕ ಕ್ರೀಡಾ ದಿನಾಚರಣೆಯನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಪುರುಷೋತ್ತಮ ಪೂಜಾರಿ, ನಿವೃತ್ತ ದೈಹಿಕ ಶಿಕ್ಷಕರು ಶ್ರೀ ಗೋಕರ್ಣನಾಥೇಶ್ವರ ಪ್ರಥಮ ದರ್ಜೆ ಕಾಲೇಜು ಮಂಗಳೂರು ಇವರು ನೆರೆವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ. ಮುರಳೀಧರ ನಾಯಕ್ ಹಾಗೂ ಶಕ್ತಿ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮೊಕ್ತೇಸರ ಶ್ರೀ ಕೆ.ಸಿ ನಾಯಕ್ ವಹಿಸಲಿದ್ದಾರೆ. ಕಾರ್ಯಕ್ರಮದ ನಂತರ ವಿವಿಧ ಕ್ರೀಡೆಗಳು ನಡೆಯಲಿವೆ. ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಶಕ್ತಿ ಪ. ಪೂ.ಕಾಲೇಜಿನ ಪ್ರಾಂಶುಪಾಲರಾದ ಪ್ರಭಾಕರ ಜಿ.ಎಸ್, ಪ್ರಧಾನ ಸಲಹೆಗಾರ ರಮೇಶ್ ಕೆ, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ವಿದ್ಯಾಕಾಮತ್ ಜಿ, ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಸಂಚಾಲಕಿ ನೀಮಾ ಸಕ್ಸೇನಾ ಮತ್ತು ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್‌ ರೈ ಉಪಸ್ಥಿತರಿರುತ್ತಾರೆ.

Also Read  ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾರೀ ಮುನ್ನಡೆ ➤ 8ನೇ ಸುತ್ತಿನಲ್ಲಿ ಭಾಗೀರಥಿ ಮುರುಳ್ಯಗೆ 11,974 ಮತಗಳ ಮುನ್ನಡೆ

error: Content is protected !!
Scroll to Top