ಶಿರಾಡಿ ಗ್ರಾ.ಪಂ. ಮಾಜಿ ಸದಸ್ಯ ನದಿಯಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.07. ಶಿರಾಡಿ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯ ಉದನೆ‌ ನಿವಾಸಿ ಜೇಕಬ್ ಎಂಬವರು ಉದನೆ ಗುಂಡ್ಯ ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಹೊಳೆಯಲ್ಲಿ ಸ್ನಾನಕ್ಕೆಂದು ತೆರಳಿದ್ದ ವೇಳೆ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ತರಲಾಗಿದೆ.

error: Content is protected !!
Scroll to Top