➤➤ Breaking News ನಾಳೆ ರಾಜ್ಯಾದ್ಯಂತ (ನ.09) ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ.08. ಅಯೋಧ್ಯೆಯ ರಾಮಮಂದಿರ ಮತ್ತು ಬಾಬರಿ ಮಸೀದಿ ವಿವಾದದ ಕುರಿತು ವಿಚಾರಣೆ ಮುಗಿಸಿರುವ ಸುಪ್ರೀಂಕೋರ್ಟ್​ ಶನಿವಾರ ಬೆಳಿಗ್ಗೆ 10.30ಕ್ಕೆ ತೀರ್ಪು ನೀಡಲಿದ್ದು, ಆ ಪ್ರಯುಕ್ತ ನಾಳೆ ದ.ಕ. ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶನಿವಾರ ಬೆಳಿಗ್ಗೆಯೇ ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​ ನೇತೃತ್ವದ ನ್ಯಾಯ ಪೀಠವು ತೀರ್ಪು ಹೊರಡಿಸಲಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶ ಹೊರಡಿಸಿದ್ದಾರೆ.

Also Read  ಅಪರಿಚಿತ ವೃದ್ದೆ ಪತ್ತೆ ➤ ವಾರಸುದಾರ ಪತ್ತೆಗೆ ಕಡಬ ಎಸ್.ಐ ಮನವಿ

error: Content is protected !!
Scroll to Top