(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ನ.9 ಗುಡ್ಡಗಾಡು ಓಟದಲ್ಲಿ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಜ್ಞಾ ಎನ್. ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಉಪನಿರ್ದೇಶಕರ ಕಛೇರಿ ಪದವಿ ಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ಶಿವಮೊಗ್ಗ ಇದರ ಸಹಯೋಗದಲ್ಲಿ ಶಿವಮೊಗ್ಗ ನೆಹರೂ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ನೂಜಿಬಾಳ್ತಿಲ ಬೆಥನಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪ್ರಜ್ಞಾ ಎನ್. 4 ಕಿ.ಮೀ. ಗುಡ್ಡಗಾಡು ಓಟದಲ್ಲಿ 4ನೇ ಸ್ಥಾನ ಪಡೆದು ಡಿ. 12ರಿಂದ 16ರ ವರೆಗೆ ಪಂಜಾಬ್‍ನಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಕರಾದ ಮತ್ತಾಯಿ ಓ.ಜೆ. ಹಾಗೂ ಪುನೀತ್ ಕೆ. ತರಭೇತಿ ನೀಡಿರುತ್ತಾರೆ. ಇವರು ನೂಜಿಬಾಳ್ತಿಲ ಗ್ರಾಮದ ನಡುವಾಳು ಬೇಬಿ ಹಾಗೂ ಗಿರಿಜಾ ದಂಪತಿಗಳ ಪುತ್ರಿ.