ನೆಟ್ಟಣ: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ನ.11. ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದ ಬಳಿ ಸೋಮವಾರದಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕುಂದಾಪುರ ಮೂಲದ ಮನೋಜ್(43) ಎಂದು ಗುರುತಿಸಲಾಗಿದೆ. ಕಿಡ್ನಿ ಹಾಗೂ ಲಿವರ್ ಖಾಯಿಲೆಯಿಂದ ಬಳಲುತ್ತಿದ್ದ ಇವರು ನೋವನ್ನು ಸಹಿಸಲಾಗದೆ ಪತ್ರ ಬರೆದಿಟ್ಟು ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top