ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಪೊಲೀಸರು ➤ ಓರ್ವನ ಬಂಧನ, ಮೂವರು ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ನ.13. ಮನೆಯ ಹಿಂಬದಿಯ ಶೆಡ್ ವೊಂದರಲ್ಲಿ ಅಕ್ರಮವಾಗಿ ದನವನ್ನು ಕಡಿದು ಮಾಂಸ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಕಡಬ ಪೊಲೀಸರು ಓರ್ವನನ್ನು ಬಂಧಿಸಿ 30 ಕೆಜಿಯಷ್ಟು ಮಾಂಸವನ್ನು ವಶಪಡಿಸಿಕೊಂಡ ಘಟನೆ ಮಂಗಳವಾರ ರಾತ್ರಿ ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ಎಂಬಲ್ಲಿ ನಡೆದಿದೆ.

ಬಂಧಿತನನ್ನು ಸ್ಥಳೀಯ ನಿವಾಸಿ ವಿನೋದ್ ಎಂದು ಗುರುತಿಸಲಾಗಿದೆ. ಬಾವೆ ಶ್ರೀಧರ್, ಪೂಪಿ ಯಾನೆ ತೋಮಸ್ ಎಂಬವರು ಪರಾರಿಯಾಗಿದ್ದಾರೆ. ನೂಜಿಬಾಳ್ತಿಲದಲ್ಲಿ ಅಕ್ರಮವಾಗಿ ದನದ ಮಾಂಸ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಡಬ ಎಎಸ್ಐ ರವಿ ಎಂ. ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ ಆರೋಪಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮತ್ತೆ ಇಂತಹ ಘಟನೆಗಳು ಮರುಕಳಿಸಿದರೆ ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತದೆ ಈ ನಿಟ್ಟಿನಲ್ಲಿ ಪೊಲೀಸರು ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ವಿ.ಹಿಂ.ಪ ಕಡಬ ಪ್ರಖಂಡದ ಕಾರ್ಯದರ್ಶಿ ಪ್ರಮೋದ್ ರೈ ನಂದುಗುರಿ ಎಚ್ಚರಿಸಿದ್ದಾರೆ.

Also Read  ಕಡಬ: ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿ ನಾಪತ್ತೆ

error: Content is protected !!
Scroll to Top