ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ➤ ಉಪ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸುಪ್ರೀಂ ತೀರ್ಪು

(ನ್ಯೂಸ್ ಕಡಬ) newskadaba.com ನವದೆಹಲಿ, ನ.13. ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ 17 ಶಾಸಕರನ್ನು ಅನರ್ಹಗೊಳಿಸಿದ್ದ ಸ್ಪೀಕರ್ ರವರ ಆದೇಶವನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್, ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಲು ಅವಕಾಶ ಕಲ್ಪಿಸಿದೆ.

ವಿಧಾನಸಭೆಯ ಸ್ಪೀಕರ್ ಆಗಿದ್ದ ರಮೇಶ್‍ಕುಮಾರ್ ಅವರು ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಒಟ್ಟು 17 ಮಂದಿಯನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದರಲ್ಲದೆ ವಿಧಾನಸಭೆಯ ಅವಧಿ ಮುಗಿಯುವವರೆಗೂ ಅವರು ಯಾವುದೇ ರೀತಿಯ ಸಾಂವಿಧಾನಿಕ ಸ್ಥಾನವನ್ನು ಅಲಂಕರಿಸುವಂತಿಲ್ಲ ಮತ್ತು ವಿಧಾನಸಭೆ ಪ್ರವೇಶಿಸುವಂತಿಲ್ಲ ಎಂದು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಇದೀಗ ಎರಡೂ ಕಡೆಯ ವಾದವನ್ನು ಆಲಿಸಿರುವ ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಎನ್‌.ವಿ.ರಮಣ್‌ ನೇತೃತ್ವದ ತ್ರಿಸದಸ್ಯ ಪೀಠವು ಶಾಸಕರ ಅನರ್ಹತೆಗೆ ಸ್ಪೀಕರ್ ಕಾಲಾವಧಿ ನಿಗದಿಪಡಿಸುವಂತಿಲ್ಲ. ಆದ್ದರಿಂದ ಅನರ್ಹರು ಉಪಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಬಹುದು ಎಂದು ಆದೇಶದಲ್ಲಿ ತಿಳಿಸಿದೆ.

Also Read  ವಿಶ್ವದ ಅತಿ ಉದ್ದದ ಅಟಲ್ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

error: Content is protected !!
Scroll to Top