ಸುಳ್ಯ: ಇನ್ನೋವಾ – ಬೈಕ್ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ನ.13. ಇನ್ನೋವಾ ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.

 

ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಮುರೂರು ನಿವಾಸಿ ಬಾಬು ನಾಯರ್ ಎಂದು ಗುರುತಿಸಲಾಗಿದೆ. ಮೃತರು ತನ್ನ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಮುರೂರು ಬಳಿ ಇನ್ನೋವಾ ಕಾರು ನಡುವೆ ಢಿಕ್ಕಿಯಾದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top