ನೀರಿನಲ್ಲಿ ಮುಳುಗಿ 9‌ನೇ ತರಗತಿಯ ವಿದ್ಯಾರ್ಥಿ ಮೃತ್ಯು ➤ ಮಕ್ಕಳ ದಿನಾಚರಣೆಯಂದೇ ದುರ್ಘಟನೆ

(ನ್ಯೂಸ್ ಕಡಬ) newskadaba.com ವಿಟ್ಲ, ನ.14. ಮಕ್ಕಳ ದಿನಾಚರಣೆ ದಿನದಂದೇ 9ನೇ ತರಗತಿಯ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಟ್ಲದ ಕಾಶಿಮಠ ಕೋಟಿಕೆರೆಯಲ್ಲಿ ಗುರುವಾರದಂದು ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ವಿಟ್ಲ ಪಡ್ನೂರು ಗ್ರಾಮದ ಕಡಂಬು ನಿವಾಸಿ ಜುಬೈದಾ ಎಂಬವರ ಪುತ್ರ, ವಿಟ್ಲದ ಖಾಸಗಿ ಶಾಲೆಯ ವಿದ್ಯಾರ್ಥಿ ಅಶ್ವದ್ ಅಹಮ್ಮದ್ ಎಂದು ಗುರುತಿಸಲಾಗಿದೆ. ಇತಿಹಾಸ ಪ್ರಸಿದ್ಧ ವಿಟ್ಲದ ಕೋಟಿಕೆರೆಯಲ್ಲಿ ಹಲವು ಮಂದಿ ಈಜಾಡುತ್ತಿದ್ದುದನ್ನು ವೀಕ್ಷಿಸುತ್ತಿದ್ದ ಅಶ್ವದ್ ಆಕಸ್ಮಿಕವಾಗಿ ಕಾಲು ಜಾರಿ ಕೆರೆ ಬಿದ್ದಿದ್ದು, ಆತ ಮುಳುಗುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣವೇ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮೃತಪಟ್ಟಿದ್ದಾನೆ.

Scroll to Top