ನೂಜಿಬಾಳ್ತಿಲದಲ್ಲಿ ಪಿಂಗಾರ ಕಲಾ ಸಂಘದ ಕಲಾವಿಧರಿಂದ ಬೀದಿ ನಾಟಕ

 (ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ನ.15  ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ದ.ಕ. ಜಿಲ್ಲಾ ಪಂಚಾಯತ್ ಇದರ ಸಹಯೋಗದಲ್ಲಿ ಪಿಂಗಾರ ಕಲಾ ಸಂಘ ಕೈಕಂಬ ಮಂಗಳೂರು ಕಲಾವಿಧರಿಂದ ಸ್ವಚ್ಛತೆ ಹಾಗೂ ತ್ಯಾಜ್ಯ ನಿರ್ವಹಣೆ ಕುರಿತು ಬೀದಿ ನಾಟಕ ಬುಧವಾರದಂದು ನಡೆಯಿತು.

ಕಾರ್ಯಕ್ರಮವನ್ನು ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್ ಚೆಂಡೆ ಬಾರಿಸುವ ಮೂಲಕ ಉದ್ಘಾಟಿಸಿದರು. ಪಿಂಗಾರ ಕಲಾವಿಧರು ಸ್ವಚ್ಛತೆ ಹಾಗೂ ತ್ಯಾಜ್ಯ ನಿರ್ವಹಣೆಯ ಕುರಿತ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಗಳನ್ನು ನಟನೆ, ಪ್ರದರ್ಶನದ ಮೂಲಕ ಪ್ರಸ್ತುತ ಪಡಿಸಿದರು. ನೂಜಿಬಾಳ್ತಿಲ ಗ್ರಾ.ಪಂ. ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕ, ಪ್ರಾಂಶುಪಾಲರಾದ ಜಾರ್ಜ್ ಟಿ.ಎಸ್., ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್, ಪಿಡಿಒ ಆನಂದ ಎ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಶಿಕ್ಷಕ ವೃಂಧ, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Also Read  ಜಿಲ್ಲಾ ಗೃಹರಕ್ಷದಳ ಕಚೇರಿಯಲ್ಲಿ ಪ್ರವಾಹ ರಕ್ಷಣಾ ಮುನ್ಸೂಚನಾ ಸಭೆ

error: Content is protected !!
Scroll to Top