(ನ್ಯೂಸ್ ಕಡಬ) newskadaba.com ಕಡಬ, ನ.15. ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಕಾಶ್ ದೇವಾಡಿಗರವರು ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಪದೋನ್ನತಿ ಹೊಂದಿ ವರ್ಗಾವಣೆ ಆಗಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಉಪ್ಪಿನಂಗಡಿ ಠಾಣಾ ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರುಕ್ಮಯ್ಯ ನಾಯ್ಕರವರನ್ನು ಎಸ್ಐ ಆಗಿ ಭಡ್ತಿಗೊಳಿಸಿ ಕಡಬ ಠಾಣೆಗೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
ಮೂಲತಃ ಬಿಳಿಯೂರು ಸಮೀಪದ ಅಡ್ಡಹಿತ್ಲು ನಿವಾಸಿಯಾಗಿರುವ ರುಕ್ಮಯ ನಾಯ್ಕ್ 1992ರಲ್ಲಿ ಕಾನ್ಸ್‌ಟೇಬಲ್ ಆಗಿ ಪೊಲೀಸ್ ಇಲಾಖೆಗೆ ಸೇರಿದ್ದು, ತದನಂತರ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ವರ್ಷದ ಹಿಂದೆ ಉಪ್ಪಿನಂಗಡಿ ಠಾಣೆಗೆ ವರ್ಗಾವಣೆಗೊಂಡಿದ್ದರು. ಇದೀಗ ಸಬ್ ಇನ್ಸ್‌ಪೆಕ್ಟರ್ ಆಗಿ ಭಡ್ತಿಗೊಂಡು ಕಡಬಕ್ಕೆ ನೇಮಕಗೊಂಡಿದ್ದಾರೆ. ಈ ಬಗ್ಗೆ ನ್ಯೂಸ್ ಕಡಬಕ್ಕೆ ಪ್ರತಿಕ್ರಿಯಿಸಿರುವ ಅವರು ಸೋಮವಾರದಂದು ಕಡಬ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಲಿದ್ದೇನೆ ಎಂದು ತಿಳಿಸಿದ್ದಾರೆ.