ಪಾದಚಾರಿಗೆ ಕಾರು ಡಿಕ್ಕಿಯಾಗಿ ಮೃತ್ಯು

 (ನ್ಯೂಸ್ ಕಡಬ) newskadaba.com ಬೆಳ್ಳಾರೆ, ನ.16  ಮಣ್ಣು ಕಚ್ಚಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಓಮಿನಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ಮಂಜುನಾಥ ನಗರದಲ್ಲಿ ಶುಕ್ರವಾರದಂದು ನಡೆದಿದೆ.


ಪಾದಚಾರಿಯಾದ ಗುರುವ ರವರಿಗೆ ತಲೆಗೆ, ಕಾಲುಗಳಿಗೆ ಗಂಭೀರ ಗಾಯವಾಗಿ ಗಾಯಾಳುವನ್ನು ಚಿಕಿತ್ಸೆಯ ಬಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿನ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಧೃಡಪಡಿಸಿದ್ದುದಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top